ಕಿಮ್ಸ್‌: ಪೂರ್ಣಾವಧಿ ನಿರ್ದೇಶಕರ ನೇಮಕಕ್ಕೆ ವಿರೋಧ

ವಿಜಯ ಪರ್ವ ವಿಶೇಷ | ಕೊಪ್ಪಳ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಿಮ್ಸ್‌ನೊಳಗಿನ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಹದಿನೈದು ಹೊಸ ನೇಮಕಾತಿಗಳಿಗೆ ಅಧಿಸೂಚನೆ ಹೊರಬಿದ್ದಿರುವ ಬೆನ್ನ ಹಿಂದೆಯೇ, ಪೂರ್ಣಾವಧಿ ನಿರ್ದೇಶಕರ ಹುದ್ದೆ ಭರ್ತಿ ಮತ್ತೆ ನನೆಗುದಿಗೆ ಬಿದ್ದಿದೆ.

ಕಿಮ್ಸ್‌ಗೆ ಪೂರ್ಣಾವಧಿ ನಿರ್ದೇಶಕರನ್ನು ನೇಮಿಸಲು ಸರಕಾರ ಮುಂದಾಗುತ್ತಿಲ್ಲ ಎಂಬ ಆರೋಪಗಳಿದ್ದವು. ಆದರೆ, ಪೂರ್ಣಾವಧಿ ನಿರ್ದೇಶಕರ ನೇಮಕಕ್ಕೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸಿದ್ಧವಿದ್ದರೂ, ಸ್ಥಳೀಯ ಸಂಸದರು ಮತ್ತು ಕಿಮ್ಸ್‌ನ ಕೆಲ ನಿರ್ದೇಶಕರು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿವೆ...ಮುಂದೆ ಓದಿ