ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ; ಸ್ಥಳೀಯರಿಂದ ಹಗ್ಗದಿಂದ ರಕ್ಷಣೆ

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆ ಆಗಿದ್ದರೂ ಅವಾಂತರ ಮಾತ್ರ ನಿಂತಿಲ್ಲ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸಿ, ಕೊಚ್ಚಿ ಹೋಗುತ್ತಿದ್ದ ಸವಾರರನ್ನು ಸ್ಥಲೀಯರು ರಕ್ಷಿಸಿದ್ದಾರೆ. ಕೊಪ್ಪಳ ತಾಲೂಕು ಶಿವಪುರ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ.

ಶಿವುಪುರ ಮತ್ತು ಹುಲಗಿ ನಡುವೆ ಹರಿಯೋ ಹಳ್ಳ ರಭಸವಾಗಿ ಹರಿಯುತ್ತಿದೆ. ಈ ನೀರಿನಲ್ಲೇ ಬೈಕ್ ಓಡಿಸಿದ್ದು, ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ಬೈಕ್ ಸವಾರ ಹಳ್ಳದಲ್ಲಿದ್ದ ಗಿಡ ಹಿಡಿದುಕೊಂಡು ನಿಂತು, ಜೀವ ಉಳಿಸಿಕೊಂಡಿದ್ದಾನೆ. ಇದನ್ನು ನೋಡಿರುವ ಸ್ಥಳೀಯರು ಹಗ್ಗದ ಮೂಲಕ ಬೈಕ್ ಸವಾರರನ್ನು ರಕ್ಷಿಸಿದ್ದು, ವಿಡಿಯೋ ವೈರಲ್ ಆಗಿದೆ.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 244
error: Content is protected !!