ಅಪ್ರಾಪ್ತ ಬಾಲಕಿ ಅಪಹರಿಸಿ ವೇಶ್ಯಾವಾಟಿಕೆಗೆ ದೂಡಿದ ಆರೋಪ; ಶಿಕ್ಷೆ ಪ್ರಕಟಿಸಿದ ಕೋರ್ಟ್

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ

ಅಪ್ರಾಪ್ತ ಬಾಲಕಿ ಅಪಹರಿಸಿ ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ  ಹಾಗೂ ಪೋಕ್ಸೋ ತ್ವರಿತ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬಲವಂತವಾಗಿ ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪಕ್ಕೆ ಫರವೀನ್ ಗಂಡ ಜಯರಾಮ ಎಂಬ ಮಹಿಳೆಗೆ 10 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ಹಾಗೂ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ರಾಮು ತಂದೆ ಬಾಬುಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಫೋಕ್ಸೋ ಪ್ರಕರಣಗಳ ತ್ವರಿತ ವಿಲೇವಾರಿ ನ್ಯಾಯಾಧೀಶರಾದ ಶಂಕರ ಎಂ.ಜಾಲವಾದಿ ತೀರ್ಪು ನೀಡಿದ್ದಾರೆ.

ಆರೋಪಿತರು ಕಳೆದ 2014ರ ನವೆಂಬರ್ 18 ರಂದು ಸಂಜೆ 6ಕ್ಕೆ ಕೊಪ್ಪಳ ರೈಲು ನಿಲ್ದಾಣದ ಮುಂದೆ ರಸ್ತೆ ಮೇಲೆ ನಿಂತಿದ್ದ ಅಪ್ರಾಪ್ತ ಬಾಲಕಿಯನ್ನು ಆಂಧ್ರ ಪ್ರದೇಶದ ಫರವೀನ್ ಅಪಹರಿಸಿ ಆಂಧ್ರದ ಪೆನಗೊಂಡ ನಗರದಲ್ಲಿನ ತನ್ನ ಮನೆಗೆ ಕರೆದೊಯ್ದು, ಬಾಲಕಿಯನ್ನು ಕೂಡಿ ಹಾಕಿ ರಾಮು ಮತ್ತು ಇತರರಿಂದ ಹಣ ಪಡೆದು ಬಾಲಕಿಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದರು.

ಕೊಪ್ಪಳ ಡಿವೈಎಸ್ಪಿ ಆರೋಪಿತರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಎಂ.ಎ ಪಾಟೀಲ, ಕೆ. ನಾಗರಾಜ ಆಚಾರ್, ಸವಿತಾ ಎಂ.ಶಿಗ್ಲಿ ಹಾಗೂ ಅಂಬಣ್ಣ, ಬಂಡಿ ಅಪರ್ಣ ಮನೋಹರ ಇವರು ವಾದ ಮಂಡಿಸಿದ್ದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 248