ಶಾಸಕ ಬಸನಗೌಡ ಪಾಟೀಲ್ ಯತ್ನಾಳರದ್ದು ಅಶಿಸ್ತಿನ ಹೇಳಿಕೆ: ಸ್ವಪಕ್ಷೀಯ ಮಂತ್ರಿಯಿಂದ ಟಾಂಗ್!

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ

ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ನೀಡಿದ್ದು ಅಶಿಸ್ತಿನ ಹೇಳಿಕೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದ ಕೋಳೂರಿನಲ್ಲಿ ಮಳೆಗೆ ಕೊಚ್ಚಿ ಹೋಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿ ಇದ್ದುಕೊಂಡು ವರಿಷ್ಠರ ವಿರುದ್ಧ ಹೀಗೆ ಮಾತನಾಡುವುದು ಸರಿಯಲ್ಲ. ಈ ಸರ್ಕಾರದ‌ ಅವಧಿ ಮುಗಿಯುವ ವರೆಗೂ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಯತ್ನಾಳ ಹೇಳಿಕೆ ವಿರುದ್ಧ ಕಿಡಿ ಕಾರಿದರು.

ಕೃಷಿ ಮಂತ್ರಿಗಳ‌ ವಿರುದ್ಧ ಇಲಾಖೆ ಸಿಬ್ಬಂದಿಗಳೇ ಭ್ರಷ್ಟಾಚಾರದ ಆರೋಪ ‌ಮಾಡಿ‌ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕೃಷಿ ಇಲಾಖೆ ಹಲವು ವರ್ಷದಿಂದ ತುಕ್ಕು ಹಿಡಿದಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕೆಲ ಭ್ರಷ್ಟ ಅಧಿಕಾರಿಗಳಿಗೆ ನೋವಾಗುವುದು ಸಹಜ. ಅನಾಮಧೇಯ ಪತ್ರಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಇದಕ್ಕೆ ಸರ್ಕಾರ ಜಗ್ಗುವುದಿಲ್ಲ. ಇಂಥ ಅನಾಮಧೇಯ ಪತ್ರ ‌ಆಧರಿಸಿ ಸುದ್ದಿ ಪ್ರಸಾರ,ಪ್ರಕಟ ಮಾಡಿದರೆ ಅಂಥವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಕೊಳೂರು ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಕಳಪೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರೇ ಅವರ ಹಣದಲ್ಲೇ ಕುಸಿದಿರೋ ಬ್ರಿಡ್ಜ್ ಕಂ ಬ್ಯಾರೇಜ್ ದುರಸ್ತಿ ಕೆಲಸ ಮಾಡ್ತಾರೆ ಎಂದು ಅವರು ಹೇಳಿದರು.

ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಟಿ. ಶ್ರೀಧರ ಇದ್ದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 792
error: Content is protected !!