ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವುದಾದರೆ ಪಾಕಿಸ್ತಾನದಲ್ಲಿ ಮಾತ್ರ ಸಾಧ್ಯ!

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ‌ಸುದ್ದಿ,‌ ಕೊಪ್ಪಳ
ಶಾಸಕ ಜಮೀರ್ ಅಹ್ಮದ್ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಹಾಗ್ತಾರೆ ಅಂತಾ ಹೇಳಿದ್ದಾರೆ. ಒಂದೊಮ್ಮೆ ಸಿದ್ದರಾಮಯ್ಯ ಮತ್ತೇ ಸಿಎಂ ಆಗಬೇಕು ಎಂದರೆ ಪಾಕಿಸ್ತಾನದಲ್ಲಿ ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಮಂತ್ರಿ ಸಿ. ಟಿ. ರವಿ ಹೇಳಿದರು.

ಕೊಪ್ಪಳದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬುಧವಾರ ಮಾತನಾಡಿದರು.

ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಆಗಿದ್ದಾಗಲೇ ಸೋತಿದ್ದಾರೆ. ಬದಾಮಿ ಕ್ಷೇತ್ರದಲ್ಲಿ ತಿಣುಕಾಡಿ ಗೆದ್ದಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಬಾರಿ ಬಂದಿರುವ ಸೀಟುಗಳು ಮುಂದಿನ ಬಾರಿ ಬರುವುದಿಲ್ಲ ಎಂದರು.

ಭಾರತ, ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಮತದಾರರಿಲ್ಲ. ಇದರಿಂದ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ. ಕಾಂಗ್ರೆಸ್ ನವರಿಗೆ ಇತ್ತೀಚೆಗೆ ಪಾಕಿಸ್ತಾನ ಹಾಗೂ ಚೀನಾದ ಮೇಲೆ ಪ್ರೀತಿ ಜಾಸ್ತಿ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಅವರು ಪಾಕಿಸ್ತಾನದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ ಮಂಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯ ಮಾಡಿದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 300
error: Content is protected !!