ಮದುವೆ ಆಗ್ತಿನಿ ಅಂತಾ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 10 ವರ್ಷ‌ ಜೈಲು

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ
ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಕೊಪ್ಪಳದ ಪೋಸ್ಕೋ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಂಕರ ಜಾಲವಾಡಿ ವಿಚಾರಣೆ ನಡೆಸಿ, ಆರೋಪಿಗೆ ದಂಡ‌ ವಿಧಿಸಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿಯ ಲಕ್ಷ್ಮೀಕ್ಯಾಂಪ್ ನಿವಾಸಿ ಹನುಮೇಶ ತಂ/ ಹನುಮಂತಪ್ಪ(26) ಶಿಕ್ಷೆಗೆ ಗುರಿಯಾದ ಆರೋಪಿ. ಕಳೆದ 2016ರ ಮಾರ್ಚ್ 19ರಂದು ನೊಂದ ಬಾಲಕಿ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಳು.

ಚಾಲಕನಾಗಿದ್ದ ಆರೋಪಿ, ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ನಂತರ ಮದುವೆ ಆಗಲು ನಿರಾಕರಿಸಿದ್ದ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಐಪಿಸಿ ಕಲಂ 376 ಮತ್ತು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಗಿನ ಗಂಗಾವತಿ ಸಿಪಿಐ ಪ್ರಭಾಕರ ಧರ್ಮಟ್ಟಿ ತನಿಖೆ ನಡೆಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಪೋಸ್ಕೋ ವಿಶೇಷ ಅಭಿಯೋಜಕಿ ಗೌರಮ್ಮ ಎಲ್.ದೇಸಾಯಿ ವಾದಿಸಿದ್ದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 118
error: Content is protected !!