ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ್

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ

ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು.

ಶಿರಾ, ಆರ್‌ಆರ್ ನಗರ ಚುನಾವಣೆಯನ್ನೇ ಗೆದ್ದಿದ್ದೇವೆ, ಬಸವ ಕಲ್ಯಾಣ ಗೆಲ್ಲಲ್ವಾ? ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೊಸಬರಿಗೆ ಸಚಿವ ಸ್ಥಾನ ನೀಡೋದು ಸಿಎಂ ಅವರ ಪರಮಾಧಿಕಾರ. ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರು ಸಚಿವ ಸ್ಥಾನ ಕೇಳಿದ್ರೆ ತಪ್ಪೇನಿದೆ? ಎಂದು ಪ್ರಶ್ನಿಸಿದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 301
error: Content is protected !!