ನಿಶ್ಚಿತಾರ್ಥಕ್ಕೆ ಹೊರಟಿದ್ದ ಮಿನಿ ಬಸ್ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಅಪಘಾತಕ್ಕೆ ಕಾರಣ ಏನು?

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲೆಯ ಕುಕನೂರು ತಾಲೂಕು ನಿಟ್ಟಾಲಿ ಕ್ರಾಸ್ ಬಳಿ ಮಿನಿಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, 4 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ಕುಕನೂರು ತಾಲೂಕು ಬೆಣಕಲ್ ಗ್ರಾಮದ ಸಂತೋಷ ವುಂಕಿ(25) ಮತ್ತು ಮಿನಿ ಬಸ್ ನಲ್ಲಿದ್ದ ರಂಗಪ್ಪ ನಾಗಣ್ಣವರ(80), ಭೀಮವ್ವ ಗೋಡಿ(70) ಸೇರಿ 3 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿ ಗ್ರಾಮಕ್ಕೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಬರುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ಒಳಗಾಗಿದೆ.

ನಿಟ್ಟಾಲಿ ಕಡೆಯಿಂದ ಬಂದ ಬೈಕ್ ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಿದೆ. ಗಾಯಾಳುಗಳು ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಲಬುರ್ಗಾ ಶಾಸಕ‌ ಹಾಲಪ್ಪ ಆಚಾರ ಸ್ಥಳಕ್ಕೆ ಭೇಟಿ ನೀಡಿ, ನಂತರ ಜಿಲ್ಲಾಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಸ್ಥಿತಿ-ಗತಿ ಬಗ್ಗೆ ಮಾಹಿತಿ ಪಡೆದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 315
error: Content is protected !!