ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಕುರುಚಲು ಕಾಡಿನಲ್ಲಿ ಪತ್ತೆ; ಹೆಣದ ಪಕ್ಕದಲ್ಲಿ ಕಂಡಿದ್ದೇನೆ?

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕುಷ್ಟಗಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕು ನಿಲೋಗಲ್ ಗ್ರಾಮದ ಹೊರವಲಯದ ಕುರುಚಲು ಕಾಡು ಪ್ರದೇಶದಲ್ಲಿ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.

ಕಾಡಿನಲ್ಲಿ ದನ ಕಾಯುವ ಹುಡಿಗರಿಗೆ ದುರ್ವಾಸನೆ ಬಂದಿದೆ. ಈ ಬಗ್ಗೆ ಶನಿವಾರ ಸಂಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಹನುಮಸಾಗರ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಕೆಲ ಹೊತ್ತಿನ ನಂತರ ಕೊಳೆತ ಸ್ಥಿತಿಯಲ್ಲಿ ಮಧ್ಯ ವಯಸ್ಕ ಮಹಿಳೆಯ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲಿ ಮದ್ಯ, ನೀರಿನ ಪೌಚ್‌ ಕಂಡು ಬಂದಿವೆ. ಇದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಈ ಕುರಿತು ಡಿವೈಎಸ್ಪಿ ಆರ್.ಎಸ್.ಉಜ್ಜಿನಕೊಪ್ಪ ಮಾರ್ಗದರ್ಶನದಲ್ಲಿ ಕುಷ್ಟಗಿ ಸಿಪಿಐ ನೇತೃತ್ವದಲ್ಲಿ ಹನುಮಸಾಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 482
error: Content is protected !!