ಟಿಕ್ ಟಾಕ್ ನಲ್ಲಿ ಪರಿಚಯ; ಶಾಸಕನ ಪುತ್ರ ಎಂದವನಿಗೆ ಮೈ, ಮನಸ್ಸು ಕೊಟ್ಟು ಯಾಮಾರಿದ ಯುವತಿ

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ
ತಾನು ಶಾಸಕನ ಪುತ್ರ ಎಂದು ಹೇಳಿಕೊಂಡು ಟಿಕ್ ಟಾಕ್ ನಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಆಕೆಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೊ ಮತ್ತು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿರುವ ಆರೋಪಿ ಜೈಲು ಪಾಲಾಗಿದ್ದಾನೆ.

ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಬಾಗೋಡಿಯ ಮಹ್ಮದ್ ಚಾಂದ್ ಪಾಷಾ ಅಲಿಯಾಸ್ ಚಂದು ಪಾಟೀಲ್ ಬಂಧಿತ ಯುವಕ. ಆರೋಪಿಯು ತಾನು ಶಾಸಕ ಅಭಯ ಪಾಟೀಲ್ ಮಗ, ಚಂದು ಪಾಟೀಲ್ ಎಂದು ಹೇಳಿಕೊಂಡು ಯುವತಿಯನ್ನು ಪರಿಚಯ ಮಾಡಿಕೊಂಡು, ಮದುವೆ ಆಗುವುದಾಗಿ ನಂಬಿಸಿದ್ದಾನೆ. ಕೊಪ್ಪಳ ಜಿಲ್ಲೆ ತಾವರಗೇರ ಪಟ್ಟಣದಲ್ಲಿ ವಾಸವಾಗಿದ್ದ ಈ ಯುವತಿಯನ್ನು ಸಿಂಧನೂರಿಗೆ ಕರೆಯಿಸಿಕೊಂಡು, ಮತ್ತು ಬರುವಂತೆ ಮಾಡಿ ಗೋವಾಕ್ಕೆ ಕರದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಯುವತಿ ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಗೆ ರಾತ್ರಿ ಇಡೀ ಬಲವಂತವಾಗಿ ಮದ್ಯಪಾನ ಮಾಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.‌ ಜೊತೆಗೆ ಯುವತಿ ಜೊತೆಗೆ ಕಳೆದ ಕ್ಷಣಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ನಂತರ ಈ ಎಲ್ಲವನ್ನು ಫೋಟೋ, ವಿಡಿಯೋ ಮಾಡಿಕೊಂಡಿದ್ದ ಆರೋಪಿ, ಯುವತಿಯ ಪಾಲಕರಿಗೆ ಕಳುಹಿಸಿ 9 ಲಕ್ಷ ರೂ. ಬೇಡಿಕೆ ಇಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಪಾಲಕರ ತಾವರಗೇರಾ ಪೊಲೀಸ್ ಠಾಣೆಗೆ ನೀಡಿದ ದೂರಿನ‌ ಮೇರೆಗೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಕುಷ್ಟಗಿಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ,‌ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಕುಷ್ಟಗಿ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ತಿಳಿಸಿದ್ದಾರೆ.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 389