ಕೃಷಿ ಹೊಂಡಕ್ಕೆ ಹಾರಿ, ನಾಲ್ವರು ಮಕ್ಕಳ ಸಮೇತ ದಂಪತಿ ಆತ್ಮಹತ್ಯೆ

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ | ಯಾದಗಿರಿ

ಒಂದೇ ಕುಟುಂಬದ ಆರು ಸದಸ್ಯರು, ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಭೀಮರಾಯ ಎಂಬಾತ ತನ್ನ ಪತ್ನಿ ಶಾಂತಮ್ಮ ಜೊತೆಗೆ ತನ್ನ ನಾಲ್ವರು ಮಕ್ಕಳಾದ ಸುಮಿತ್ರಾ, ಶ್ರೀದೇವಿ, ಲಕ್ಷ್ಮೀ, ಶಿವರಾಜ ಜೊತೆ ತನ್ನದೆ ಹೊಲದ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಭೀಮರಾಯ ಕೃಷಿ ಮತ್ತು ವೈಯಕ್ತಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಲಾಕ್ ಡೌನ ಹಿನ್ನೆಲೆ ಬೆಳೆಗೆ ಬೆಳೆಗೆ ಉತ್ತರ ದರ ಸಿಗದೇ ನಷ್ಟ ಉಂಟಾಗಿದ್ದರಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.

ಸಂಜೆ ತನ್ನ ಕುಟುಂಬದ ಜೊತೆಗೆ ಜಮೀನಿಗೆ ತೆರಳಿದ್ದ ಭೀಮರಾಯ, ಮೊದಲಿಗೆ ಮಕ್ಕಳ ಕಾಲಿಗೆ ಕಲ್ಲು ಕಟ್ಟಿ ಹೊಂಡಕ್ಕೆ ಹಾಕಿದ್ದಾನೆ, ಬಳಿಕ ತನ್ನ ಹೆಂಡತಿ ಜೊತೆಗೆ ತಾನು ಸಹ ಹಾರಿದ್ದಾನೆ. ಶಹಾಪುರ ಪೋಲಿಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಶವಗಳನ್ನ ಹೊರತೆಗೆದು, ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ವೇದಮೂರ್ತಿ, ಎಸಿ ಪ್ರಶಾಂತ್ ಹನಗಂಡಿ, ತಹಶೀಲ್ದಾರ ಜಗನ್ನಾಥ ರೆಡ್ಡಿ, ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

+1
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 989