ಹಾಲಪ್ಪ ಆಚಾರ್‌ ಈಗ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ

ಈ ಸುದ್ದಿ ಹಂಚಿಕೊಳ್ಳಿ:

ವಿಜಯ ಪರ್ವ ಸುದ್ದಿ | ಕೊಪ್ಪಳ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. 

ಕೊಪ್ಪಳ ಜಿಲ್ಲೆ ಯಲಬುರ್ಗಾ ಕ್ಷೇತ್ರದಿಂದ ಸಚಿವರಾಗಿರುವ ಹಾಲಪ್ಪ ಆಚಾರ್‌ ಅವರಿಗೆ ಮಹತ್ವದ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳನ್ನು ನೀಡಲಾಗಿದೆ.

ಹಣಕಾಸು ಇಲಾಖೆಯನ್ನು ಸಿಎಂ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಆರಗ ಜ್ಞಾನೇಂದ್ರ ಅವರಿಗೆ ಮಹತ್ವದ ಗೃಹ ಖಾತೆ ನೀಡಲಾಗಿದೆ. 

ಬಿ.ಸಿ. ನಾಗೇಶಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ;  ಮುರುಗೇಶ ನಿರಾಣಿಗೆ ಬೃಹತ್ ಕೈಗಾರಿಕೆ ಹಾಗೂ ಸಿ.ಸಿ. ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ಕೊಡಲಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 29 ಸಚಿವರ ನೂತನ ಸಂಪುಟ.

ಸಚಿವರು ಮತ್ತು ಅವರ ಖಾತೆ ವಿವರ

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ
  2. ಗೋವಿಂದ ಕಾರಜೋಳ- ಜಲ ಸಂಪನ್ಮೂಲ
  3. ಆರ್.‌ ಅಶೋಕ- ಕಂದಾಯ
  4. ಸಿ.ಸಿ. ಪಾಟೀಲ- ಲೋಕೋಪಯೋಗಿ
  5. ಕೆ.ಎಸ್.  ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
  6. ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
  7. ಬಿ. ಶ್ರೀರಾಮುಲು- ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ
  8. ವಿ. ಸೋಮಣ್ಣ- ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ
  9. ಉಮೇಶ್ ವಿ. ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ
  10. ಎಸ್. ಅಂಗಾರ- ಮೀನುಗಾರಿಕೆ, ಬಂದರು
  11. ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
  12. ಆರಗ ಜ್ಞಾನೇಂದ್ರ- ಗೃಹ
  13. ಡಾ. ಸಿ.ಎನ್. ಅಶ್ವತ್ಥನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ
  14. ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ
  15. ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ
  16. ಮುರುಗೇಶ್ ಆರ್.‌ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  17. ಅರಬೈಲ್ ಶಿವರಾಂ ಹೆಬ್ಬಾರ್- ಕಾರ್ಮಿಕ
  18. ಎಸ್.ಟಿ. ಸೋಮಶೇಖರ್- ಸಹಕಾರ
  19. ಬಿ.ಸಿ. ಪಾಟೀಲ- ಕೃಷಿ
  20. ಬೈರತಿ ಬಸವರಾಜ- ನಗರಾಭಿವೃದ್ಧಿ
  21. ಡಾ. ಕೆ. ಸುಧಾಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ
  22. ಕೆ. ಗೋಪಾಲಯ್ಯ- ಅಬಕಾರಿ
  23. ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್
  24. ಎಂ.ಟಿ.ಬಿ. ನಾಗರಾಜು- ಪೌರಾಡಳಿತ, ಸಣ್ಣ ಕೈಗಾರಿಕೆ
  25. ಕೆ.ಸಿ. ನಾರಾಯಣ ಗೌಡ- ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ
  26. ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
  27. ವಿ. ಸುನೀಲ್ ಕುಮಾರ್- ಇಂಧನ, ಕನ್ನಡ ಮತ್ತು ಸಂಸ್ಕೃತಿ
  28. ಶಂಕರ ಪಾಟೀಲ್ ಬಿ. ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ
  29. ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ
  30. ಪ್ರಭು ಚೌವ್ಹಾಣ- ಪಶು ಸಂಗೋಪನೆ

———

+1
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 433