ನೀರು ಕಳ್ಳತನ ಮಾಡಿದ್ರೆ ಹುಷಾರ್; ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಎಚ್ಚರಿಕೆ

ಈ ಸುದ್ದಿ ಹಂಚಿಕೊಳ್ಳಿ:

ವಿಜಯಪರ್ವ ಸುದ್ದಿ, ಕೊಪ್ಪಳ
ತುಂಗಭದ್ರ ಡ್ಯಾಂ ಎಡದಂಡೆ ಕಾಲುವೆಯಿಂದ ನೀರು ಕಳ್ಳತನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಎಡದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರಾಯಚೂರು ಜಿಲ್ಲೆಯ ರೈತರು ಹೋರಾಟ ಆರಂಭಿಸಿರುವ ಹಿನ್ನೆಲೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.‌ ತುಂಗಭದ್ರ ಜಲಾಶಯದ ಎಡದಂಡೆ ಕೆನಾಲ್ ನೀರನ್ನು ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಇಲ್ಲದ ರೈತರು ಪಂಪ್ ಸೆಟ್ ಮೂಲಕ ನೀರು ಎತ್ತಿಕೊಳ್ಳುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಇದೂ ಕೂಡಲೇ ನಿಲ್ಲಿಸಬೇಕು ಎಂದು ಎಚ್ಷರಿಕೆ ನೀಡಿದ್ದಾರೆ.

ಹರಿಯುವ ನೀರನ್ನು ಹೀಗೆ ಪಂಪ್ ಸೆಟ್ ಅಳವಡಿಸಿ ಹೊಲಕ್ಕೆ ಪಡೆಯುವುದು ಕಾನೂನಿಗೆ ವಿರುದ್ಧವಾಗಿದೆ. ಇಂಥ ಪಂಪ್ ಸೆಟ್ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಉನ್ನತ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ಭರವಸೆ ನೀಡಿದ್ದಾರೆ.  ಕೂಡಲೇ ಎಡದಂಡೆ ಕಾಲುವೆ ಅಚ್ಚುಕಟ್ಟು ವ್ಯಾಪ್ತಿಯ ಟೇಲೆಂಡ್ ರೈತರು ಪ್ರತಿಭಟನೆ ನಿಲ್ಲಿಸಬೇಕು ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

ಟಿಬಿ ಡ್ಯಾಂ ಎಡದಂಡೆ ಕಾಲುವೆಯ ಕೊನೆ ಭಾಗಕ್ಕೆ ನೀರು ತಲುಪಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರು ರೈತರು ಇಂದು ಕೊಪ್ಪಳದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

+3
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 304
error: Content is protected !!