ಅಧಿಕಾರ ವಹಿಸಿಕೊಂಡ ಡಿಸಿ ಎಸ್.ವಿಕಾಸ ಕಿಶೋರ

ಈ ಸುದ್ದಿ ಹಂಚಿಕೊಳ್ಳಿ:

ಕೊಪ್ಪಳ: ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಎಸ್. ವಿಕಾಸ ಕಿಶೋರ ಬುಧವಾರ ಅಧಿಕಾರ ವಹಿಸಿಕೊಂಡರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಎಸ್. ವಿಕಾಸ ಕಿಶೋರ್ ಅವರು ಇಂದು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಸಿಬ್ಬಂದಿ ಇದ್ದರು.

0
ಈ ಸುದ್ದಿ ಹಂಚಿಕೊಳ್ಳಿ:
ವೀಕ್ಷಣೆಗಳು: 103