ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು; ಎಚ್.ಕೆ.ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು ಎಂದು ಮಾಜಿ ಮಂತ್ರಿ ಎಚ್.ಕೆ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ‌ ಉತ್ತರಿಸಿ, ಕಾಂಗ್ರೆಸ್ ‌ನಲ್ಲಿ ಚುನಾವಣೆ ನಂತರ ಸಿಎಂ ಯಾರು ಎಂಬ ಪ್ರಶ್ನೆ ಬರುತ್ತೆ.… ..ಮುಂದೆ ಓದಿ

ಕೊಲೆ ಪ್ರಕರಣದ ತನಿಖೆ ವೇಳೆ ದಾರಿ ತಪ್ಪಿದ ಪಿಎಸ್ಐ; ಅಮಾಯಕರಿಗೆ ಹಿಗ್ಗಾ- ಮುಗ್ಗ ಥಳಿತ!

ವಿಜಯಪರ್ವ ಸುದ್ದಿ,‌ ಕೊಪ್ಪಳ
ಜಿಲ್ಲೆಯ ಕಾರಟಗಿ ಪಿಎಸ್ಐ ಅವಿನಾಶ ಕಾಂಬ್ಲೆ ಕೊಲೆ ಆರೋಪಿಗಳ ಪತ್ತೆ ಮಾಡುವ ಭರದಲ್ಲಿ ಅಮಾಯಕರ‌ ಜೀವ ಹಿಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಿಎಸ್ಐಯಿಂದ ಥಳಿಸಿಕೊಂಡಿರೋ ಧಾರವಾಡ ಜಿಲ್ಲೆ ಮದಾರಮಡ್ಡಿ ಮೂಲದ ಇಬ್ಬರು ಗ್ಲಾಸ್ ಸ್ಟೀಮ್‌ ಜೋಡಿಸುವ ಕಾರ್ಮಿಕರು ಮಾನವ ಹಕ್ಕು ಆಯೋಗಕ್ಕೆ ದೂರು‌ ನೀಡಿದ್ದಾರೆ.

ಕಳೆದ ಅ.17 ರಂದು ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ದಂಪತಿ ಮೇಲೆ ರಾಡ್ ನಿಂದ ಹಲ್ಲೆ ಮಾಡಿ, ಮಹಿಳೆ ಕೊಲೆ ಮಾಡಲಾಗಿತ್ತು.‌… ..ಮುಂದೆ ಓದಿ

ಉತ್ತರ ಕರ್ನಾಟಕ ನಿರ್ಲಕ್ಷ ಮಾಡಿದ್ದಕ್ಕೆ ಜೆಡಿಎಸ್ ಹೊರತಲ್ಲ: ಮಾಜಿ ಮಂತ್ರಿ ಬಸವರಾಜ ಹೊರಟ್ಟಿ

ವಿಜಯಪರ್ವ ಸುದ್ದಿ, ಕೊಪ್ಪಳ
ರಾಜ್ಯದಲ್ಲಿನ ಪ್ರಮುಖ 3 ಪಕ್ಷದಿಂದಲೂ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ. ಇದಕ್ಕೆ ಜೆಡಿಎಸ್ ಹೊರತಲ್ಲ ಎಂದು ಮಾಜಿ ಮಂತ್ರಿ ಬಸವರಾಜ ಹೊರಟ್ಟಿ ಹೇಳಿದರು.

ಕೊಪ್ಪಳಲ್ಲಿ ಸುದ್ದಿಗೋಷ್ಠಿ ನಡೆಸಿ ಗುರುವಾರ ಮಾತನಾಡಿ, ಉತ್ತರ ಕರ್ನಾಟಕ ಭಾಗದವರು ರಾಜ್ಯದ ಸಿಎಂ ಆಗಬೇಕು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ಹೇಳಿಕೆ ಪಕ್ಷದ‌ ಆಂತರಿಕ ವಿಷಯ. ಆದ್ರೆ,ಉತ್ತರ ಕರ್ನಾಟಕದವರು ಯಾವುದೇ ಪಕ್ಷದಿಂದ ಸಿಎಂ ಆದ್ರೂ ಸ್ವಾಗತಿಸುತ್ತೇನೆ.… ..ಮುಂದೆ ಓದಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳರದ್ದು ಅಶಿಸ್ತಿನ ಹೇಳಿಕೆ: ಸ್ವಪಕ್ಷೀಯ ಮಂತ್ರಿಯಿಂದ ಟಾಂಗ್!

ವಿಜಯಪರ್ವ ಸುದ್ದಿ, ಕೊಪ್ಪಳ

ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ನೀಡಿದ್ದು ಅಶಿಸ್ತಿನ ಹೇಳಿಕೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದ ಕೋಳೂರಿನಲ್ಲಿ ಮಳೆಗೆ ಕೊಚ್ಚಿ ಹೋಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿ ಇದ್ದುಕೊಂಡು ವರಿಷ್ಠರ ವಿರುದ್ಧ ಹೀಗೆ ಮಾತನಾಡುವುದು ಸರಿಯಲ್ಲ.… ..ಮುಂದೆ ಓದಿ

ಯೋಗ, ಯೋಗ್ಯತೆ ಇದ್ದವರು ಸಮಗ್ರ ಕರ್ನಾಟಕಕ್ಕೆ ಸಿಎಂ ಆಗಲಿ; ಯತ್ನಾಳಗೆ ಸಿ.ಟಿ.ರವಿ ಟಾಂಗ್

ವಿಜಯಪರ್ವ ಸುದ್ದಿ, ಕೊಪ್ಪಳ
ಸಮಗ್ರ ಕರ್ನಾಟಕದ ಆಶಯಕ್ಕೆ ಮಣ್ಣು ಹಾಕುವ ಕೆಲಸ ಯಾರೂ ಮಾಡಬಾರದು. ಯೋಗ, ಯೋಗ್ಯತೆ ಇರುವ ಯಾರಾದರೂ ಸಮಗ್ರ ಕರ್ನಾಟಕದ ಸಿಎಂ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಮಂತ್ರಿ ಸಿ.ಟಿ.ರವಿ ಹೇಳಿದರು.

ಕೊಪ್ಪಳ ಗವಿಮಠದ‌ ಗವಿಸಿದ್ದೇಶ್ವರ ಸ್ವಾಮೀಜಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು.

ಉತ್ತರ ಕರ್ನಾಟಕ ಭಾಗದವರು ಕರ್ನಾಟಕದ ‌ಸಿಎಂ ಆಗಬೇಕು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ಹೇಳಿಕೆಗೆ ಪ್ರತಿಕ್ರಿಯೆ‌ ನೀಡಿದರು.… ..ಮುಂದೆ ಓದಿ

ಜಡಿಮಳೆ ನಡುವೆಯೂ ಪೊಲೀಸ್ ಹುತಾತ್ಮ ದಿನ ಆಚರಣೆ; ಡಿಸಿ ಎಸ್.ವಿಕಾಸ ಕಿಶೋರ‌ ಭಾಗಿ

ವಿಜಯಪರ್ವ ಸುದ್ದಿ, ಕೊಪ್ಪಳ

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನ ಬುಧವಾರ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಸ್.ವಿಕಾಸ‌ ಕಿಶೋರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಡಿ ಮಳೆಯ ನಡುವೆಯೂ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಮಳೆಯ ಜೊತೆ ಜೊತೆಯಲ್ಲಿಯೇ ಕವಾಯತು ನಡೆಯಿತು.… ..ಮುಂದೆ ಓದಿ

ಉತ್ತರ ಕರ್ನಾಟಕದಲ್ಲಿ ಮತ್ತೇ ಗುಡುಗು ಸಹಿತ ಮಳೆ ಮುನ್ಸೂಚನೆ; ಪ್ರವಾಹ ಭೀತಿ

ವಿಜಯಪರ್ವ ಸುದ್ದಿ, ಬೆಂಗಳೂರು
ಉತ್ತರಕ್ಕೆ ಕರ್ನಾಟಕ ಮತ್ತು ಕರಾವಳಿ ಭಾಗದ ಕೆಲ ಜಿಲ್ಲೆಯಲ್ಲಿ ಮತ್ತೇ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 21 ಮತ್ತು 22 ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರವಾಹ ಭೀತಿ ಎದುರಾಗಲಿದೆ.‌ ಅ.21 ಮತ್ತು 22 ರಂದು ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹೆಲ್ಲೋ(ಹಳದಿ) ಅಲರ್ಟ್ ಘೋಷಣೆಯಾಗಿದೆ.… ..ಮುಂದೆ ಓದಿ

ಕಾಂಗ್ರೆಸ್‌ ಯೋಗ್ಯತೆ ಬಗ್ಗೆ ಮಾತನಾಡುವಷ್ಟು ಮಾಜಿ ಸಿಎಂ ಕುಮಾರಸ್ವಾಮಿ ಯೋಗ್ಯರಲ್ಲ: ತಂಗಡಗಿ

ವಿಜಯಪರ್ವ ಸುದ್ದಿ, ಕೊಪ್ಪಳ
ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಕಾಂಗ್ರೆಸ್ ಪಕ್ಷದ ಜನಪರ‌ ಕಾಳಜಿ ಏನೆಂಬುದು ದೇಶದ ಜನತೆಗೆ ಗೊತ್ತಿದೆ. ಕಾಂಗ್ರೆಸ್‌ ಯೋಗ್ಯತೆ ಬಗ್ಗೆ ಮಾತನಾಡುವಷ್ಟು ಮಾಜಿ ಸಿಎಂ ಕುಮಾರಸ್ವಾಮಿ ಯೋಗ್ಯರಲ್ಲ ಎಂದು ಮಾಜಿ ಮಂತ್ರಿ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಜೆಡಿಎಸ್ ಪಕ್ಷ ಮತ್ತೊಬ್ಬರತ್ತ ಬೆರಳು ತೋರಿಸುವಾಗ ಇನ್ನುಳಿದ ಬೆರಳುಗಳು ತಮ್ಮ ಕಡೆಗೇ‌ ಇರುತ್ತವೆ‌ ಎಂಬುದನ್ನು ಮರೆಯಬಾರದು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.… ..ಮುಂದೆ ಓದಿ

ಕೇಂದ್ರ- ರಾಜ್ಯ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಕೈ ಬಿಡಲಿ: ಶೀಲವಂತರ

ವಿಜಯಪರ್ವ ಸುದ್ದಿ, ಕೊಪ್ಪಳ
ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಬದಲಾಗಿ ಕಾರ್ಪೊರೇಟ್ ಕಂಪನಿಗಳ ಇಷ್ಟಾರ್ಥ ಪೂರೈಕೆಗೆ ಅವಿರತವಾಗಿ ಶ್ರಮಿಸುತ್ತಿದೆ ಎಂದು ಹೋರಾಟಗಾರ ಬಸವರಾಜ ಶೀಲವಂತರ ದೂರಿದರು.

ಕೊಪ್ಪಳದ ಅಶೋಕ ಸರ್ಕಲ್ ನಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶುಕ್ರವಾರ ಮಾತನಾಡಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ ರೈತರ, ಕಾರ್ಮಿಕರ ಹಿತ ಮರೆತಿದೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.… ..ಮುಂದೆ ಓದಿ

ಕೇಂದ್ರ, ರಾಜ್ಯ ಸರ್ಕಾರಗಳ ರೈತ‌- ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ವಿಜಯಪರ್ವ ಸುದ್ದಿ, ‌ಗಂಗಾವತಿ
ನಗರದ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ರೈತ ಮತ್ತು ಕಾರ್ಮಿಕ ಪರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು. ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ಕ್ರಮ ಖಂಡಿಸಿ ಒಂದು ದಿನದ ಸಾಂಕೇತಿಕ ಸತ್ಯಾಗ್ರಹ ನಡೆಸಿದರು.…
..ಮುಂದೆ ಓದಿ

error: Content is protected !!