ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ; ಸ್ಥಳೀಯರಿಂದ ಹಗ್ಗದಿಂದ ರಕ್ಷಣೆ

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆ ಆಗಿದ್ದರೂ ಅವಾಂತರ ಮಾತ್ರ ನಿಂತಿಲ್ಲ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸಿ, ಕೊಚ್ಚಿ ಹೋಗುತ್ತಿದ್ದ ಸವಾರರನ್ನು ಸ್ಥಲೀಯರು ರಕ್ಷಿಸಿದ್ದಾರೆ. ಕೊಪ್ಪಳ ತಾಲೂಕು ಶಿವಪುರ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ.

ಶಿವುಪುರ ಮತ್ತು ಹುಲಗಿ ನಡುವೆ ಹರಿಯೋ ಹಳ್ಳ ರಭಸವಾಗಿ ಹರಿಯುತ್ತಿದೆ. ಈ ನೀರಿನಲ್ಲೇ ಬೈಕ್ ಓಡಿಸಿದ್ದು, ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ.… ..ಮುಂದೆ ಓದಿ

ವಿಡಿಯೋ; ತುಂಬಿ ಹರಿವ ಹಳ್ಳದಲ್ಲಿ ಪತ್ನಿ ಹೊತ್ತು ಹಳ್ಳದಾಟಿದ- ಮಗು ಎತ್ತಿಕೊಂಡ ಯುವಕ ನೀರಿಗೆ ಬಿದ್ದ!

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದ ವ್ಯಕ್ತಿಯೊಬ್ಬ ಪತ್ನಿಯನ್ನು ಎತ್ತಿಕೊಂಡು ಅಳವಂಡಿ- ಕಂಪ್ಲಿ ಮಾರ್ಗದ ಹಳ್ಳ ದಾಟಿದ್ದಾನೆ.

ಇನ್ನು ಈ ದಂಪತಿ ಸಹಾಯ ಮಾಡಲು ಇವರ ಮಗುವನ್ನು ಎತ್ತಿಕೊಂಡು ಹೋಗಿದ್ದ ಸ್ಥಳೀಯ ಯುವಕ ಆಯ ತಪ್ಪಿ ಹಳ್ಳಕ್ಕೆ ಬೀಳುವ ದೃಶ್ಯ ಮೈ ಜುಮ್ ಎನ್ನುವಂತಿದೆ.… ..ಮುಂದೆ ಓದಿ

ಮಳೆ ಆರ್ಭಟ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಮಹಿಳೆಯರ ಶವ ಪತ್ತೆ

ವಿಜಯಪರ್ವ ಸುದ್ದಿ, ಯಲಬುರ್ಗಾ

ಜಿಲ್ಲಾದ್ಯಂತ ಕಳೆದ ನಾಲ್ಕು ದಿನದಿಂದ ಬಿಟ್ಟುಬಿಡದೆ ಸುರಿಯುತ್ತಿರೋ ಮಳೆಯಿಂದ ಸೆಪ್ಟೆಂಬರ್ 27ರ ಭಾನುವಾರ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಮಹಿಳೆಯರು ಶವವಾಗಿ ಸೋಮವಾರ ಪತ್ತೆಯಾಗಿದ್ದಾರೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಕರಮುಡಿ ಗ್ರಾಮದ ರತ್ನವ್ವ ಮಾನಶೆಟ್ಟಿ(48) ಹಾಗೂ ಶಾಂತವ್ವ ಮ್ಯಾಗೇರಿ(44) ಕೊಚ್ಚಿ ಹೋಗಿರುವ ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಹೊಲದ ಕೆಲಸ ಮುಗಿಸಿ ಸಂಜೆ ನಾಲ್ವರು ಮಹಿಳೆಯರು ಹಳ್ಳ ದಾಟಿ ಬರುವ ಅನಿವಾರ್ಯತೆ ಎದುರಾಗಿದೆ.… ..ಮುಂದೆ ಓದಿ

error: Content is protected !!