ಕೇಂದ್ರ, ರಾಜ್ಯ ಸರ್ಕಾರಗಳ ರೈತ‌- ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ವಿಜಯಪರ್ವ ಸುದ್ದಿ, ‌ಗಂಗಾವತಿ
ನಗರದ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ರೈತ ಮತ್ತು ಕಾರ್ಮಿಕ ಪರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು. ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ಕ್ರಮ ಖಂಡಿಸಿ ಒಂದು ದಿನದ ಸಾಂಕೇತಿಕ ಸತ್ಯಾಗ್ರಹ ನಡೆಸಿದರು.…
..ಮುಂದೆ ಓದಿ

ಜಿಟಿಜಿಟಿ ಮಳೆಗೆ ಮನೆ ಮೇಲ್ಚಾವಣಿ ಕುಸಿತ; ಮಲಗಿದಲ್ಲೇ ಆಕಳು ಸಾವು- ಜಿಲ್ಲಾದ್ಯಂತ ಅಪಾರ ಹಾನಿ

ವಿಜಯಪರ್ವ ಸುದ್ದಿ, ಕೊಪ್ಪಳ
ಕೊಪ್ಪಳ ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗ್ಗೆಯೂ ಜಿಟಿಜಿಟಿ ಮಳೆ ಮುಂದುವರೆದಿದೆ. ಉತ್ತರೆ ಮಳೆಗೆ ರೈತರು ಮತ್ತು ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕು ಬೆಣಕಲ್ ಗ್ರಾಮದಲ್ಲಿ ಚನ್ನಪ್ಪ ಬಳಗೇರಿ ಎಂಬುವರ ಮಣ್ಣಿನ ಮನೆಯ ಮೇಲ್ಚಾವಣಿ ಸಂಪೂರ್ಣ ಕುಸಿದು ಬಿದ್ದಿದ್ದು, ಮಲಗಿದಲ್ಲೇ ಆಕಳು ಮೃತಪಟ್ಟಿದೆ. ಮನೆಯಲ್ಲಿಮಲಗಿದ್ದ ಚನ್ನಪ್ಪ ಬಳಗೇರಿ ಅವರ ಮಗ ಮಂಜುನಾಥ ಬಳಗೇರಿ(28) ಗಂಭೀರ ಗಾಯಗೊಂಡಿದ್ದಾನೆ.… ..ಮುಂದೆ ಓದಿ

error: Content is protected !!