ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು; ಎಚ್.ಕೆ.ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು ಎಂದು ಮಾಜಿ ಮಂತ್ರಿ ಎಚ್.ಕೆ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ‌ ಉತ್ತರಿಸಿ, ಕಾಂಗ್ರೆಸ್ ‌ನಲ್ಲಿ ಚುನಾವಣೆ ನಂತರ ಸಿಎಂ ಯಾರು ಎಂಬ ಪ್ರಶ್ನೆ ಬರುತ್ತೆ.… ..ಮುಂದೆ ಓದಿ

ಕೊಲೆ ಪ್ರಕರಣದ ತನಿಖೆ ವೇಳೆ ದಾರಿ ತಪ್ಪಿದ ಪಿಎಸ್ಐ; ಅಮಾಯಕರಿಗೆ ಹಿಗ್ಗಾ- ಮುಗ್ಗ ಥಳಿತ!

ವಿಜಯಪರ್ವ ಸುದ್ದಿ,‌ ಕೊಪ್ಪಳ
ಜಿಲ್ಲೆಯ ಕಾರಟಗಿ ಪಿಎಸ್ಐ ಅವಿನಾಶ ಕಾಂಬ್ಲೆ ಕೊಲೆ ಆರೋಪಿಗಳ ಪತ್ತೆ ಮಾಡುವ ಭರದಲ್ಲಿ ಅಮಾಯಕರ‌ ಜೀವ ಹಿಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಿಎಸ್ಐಯಿಂದ ಥಳಿಸಿಕೊಂಡಿರೋ ಧಾರವಾಡ ಜಿಲ್ಲೆ ಮದಾರಮಡ್ಡಿ ಮೂಲದ ಇಬ್ಬರು ಗ್ಲಾಸ್ ಸ್ಟೀಮ್‌ ಜೋಡಿಸುವ ಕಾರ್ಮಿಕರು ಮಾನವ ಹಕ್ಕು ಆಯೋಗಕ್ಕೆ ದೂರು‌ ನೀಡಿದ್ದಾರೆ.

ಕಳೆದ ಅ.17 ರಂದು ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ದಂಪತಿ ಮೇಲೆ ರಾಡ್ ನಿಂದ ಹಲ್ಲೆ ಮಾಡಿ, ಮಹಿಳೆ ಕೊಲೆ ಮಾಡಲಾಗಿತ್ತು.‌… ..ಮುಂದೆ ಓದಿ

ಉತ್ತರ ಕರ್ನಾಟಕ ನಿರ್ಲಕ್ಷ ಮಾಡಿದ್ದಕ್ಕೆ ಜೆಡಿಎಸ್ ಹೊರತಲ್ಲ: ಮಾಜಿ ಮಂತ್ರಿ ಬಸವರಾಜ ಹೊರಟ್ಟಿ

ವಿಜಯಪರ್ವ ಸುದ್ದಿ, ಕೊಪ್ಪಳ
ರಾಜ್ಯದಲ್ಲಿನ ಪ್ರಮುಖ 3 ಪಕ್ಷದಿಂದಲೂ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ. ಇದಕ್ಕೆ ಜೆಡಿಎಸ್ ಹೊರತಲ್ಲ ಎಂದು ಮಾಜಿ ಮಂತ್ರಿ ಬಸವರಾಜ ಹೊರಟ್ಟಿ ಹೇಳಿದರು.

ಕೊಪ್ಪಳಲ್ಲಿ ಸುದ್ದಿಗೋಷ್ಠಿ ನಡೆಸಿ ಗುರುವಾರ ಮಾತನಾಡಿ, ಉತ್ತರ ಕರ್ನಾಟಕ ಭಾಗದವರು ರಾಜ್ಯದ ಸಿಎಂ ಆಗಬೇಕು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ಹೇಳಿಕೆ ಪಕ್ಷದ‌ ಆಂತರಿಕ ವಿಷಯ. ಆದ್ರೆ,ಉತ್ತರ ಕರ್ನಾಟಕದವರು ಯಾವುದೇ ಪಕ್ಷದಿಂದ ಸಿಎಂ ಆದ್ರೂ ಸ್ವಾಗತಿಸುತ್ತೇನೆ.… ..ಮುಂದೆ ಓದಿ

ಪವರ್ ಸ್ಟಾರ್ ಪುನೀತ್ ಇನ್ ಅಂಜನಾದ್ರಿ; ಮಾಸ್ಕ್ ಜಾಗೃತಿ, ಅಂಜನಾದ್ರಿ ಬೆಟ್ಟ ಏರಿದ ನಟ

ವಿಜಯಪರ್ವ ಸುದ್ದಿ, ಗಂಗಾವತಿ
ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಸೇರಿ ಸುತ್ತಮುತ್ತಲಿನ ಗ್ರಾಮ ಹಾಗೂ ಹೊಸಪೇಟೆ ಅಕ್ಕ ಪಕ್ಕದ ಸ್ಥಳಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ತೆಲುಗು ನಟ ಶ್ರೀಕಾಂತ ಅಭಿನಯದ ಜೇಮ್ಸ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರೀಕರಣ ಕೆಲಸದ ನಡುವೆಯೇ ಗಂಗಾವತಿ ಪೊಲೀಸ್ ಅಧಿಕಾರಿಗಳ ಮನವಿ ಮೇರೆಗೆ ಪವರ್ ಸ್ಟಾರ್ ಪುನೀತ್ ಅವರು, ಗುರುವಾರ ಬೆಳಗ್ಗೆ ಕರೋನ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳ ಕುರಿತು ತಿಳಿವಳಿಕೆ ನೀಡಿದರು.… ..ಮುಂದೆ ಓದಿ

ಕಾರಟಗಿ ದಂಪತಿ ಕೊಲೆ ಪ್ರಕರಣ; ಚಿಲ್ಲರೆ ಹಣಕ್ಕೆ‌ ಸುಪಾರಿ ಕೊಟ್ಟಿದ್ದ ಮೃತಳ ತಮ್ಮ; ಎಸ್ಪಿ ಟಿ.ಶ್ರೀಧರ ಸುದ್ದಿಗೋಷ್ಠಿ

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ದಂಪತಿ ಮೇಲೆ ಹಲ್ಲೆ‌, ಮಹಿಳೆ ಸ್ಥಳದಲ್ಲೇ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬುಧವಾರ ನ್ಯಾಯಾಂಗ ಬಂಧನಕ್ಕೆ ನೀಡಿದರು.

ಕೊಪ್ಪಳದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್ಪಿ ಟಿ.ಶ್ರೀಧರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೃತ ಮಹಿಳೆ ತಮ್ಮ ಅವಿನಾಶ ಚಂದನಶಿವ, ಸಂಬಂಧಿ ಯುವರಾಜ ನಿಂಬಾಳ್ಳರ ಬಂಧಿತ ಆರೋಪಿಗಳು.… ..ಮುಂದೆ ಓದಿ

ಶಾಸಕ ಬಸನಗೌಡ ಯತ್ನಾಳರನ್ನ ಕೂಡಲೇ ಪಕ್ಷದಿಂದ ಕಿತ್ತು ಹಾಕಿ, ಅಯೋಗ್ಯರ ಹೇಳಿಕೆಗೆ ಬಿಜೆಪಿ ಜಗ್ಗಲ್ಲ: ಈಶ್ವರಪ್ಪ

ವಿಜಯಪರ್ವ ಸುದ್ದಿ, ಕೊಪ್ಪಳ
ಬಾಯಿ ಚಪಲಕ್ಕೆ ಮಾತನಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಕೂಡಲೇ ಪಕ್ಷದಿಂದ ಕಿತ್ತುಹಾಕಬೇಕು ಎಂದು ರಾಜ್ಯಾಧ್ಯಕ್ಷರಿಗೆ ಒತ್ತಾಯ ಮಾಡುತ್ತೇನೆ. ಅಯೋಗ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬುಧವಾರ ಮಾತನಾಡಿದರು.

ಇತ್ತೀಷೆಗಷ್ಟೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.‌… ..ಮುಂದೆ ಓದಿ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವುದಾದರೆ ಪಾಕಿಸ್ತಾನದಲ್ಲಿ ಮಾತ್ರ ಸಾಧ್ಯ!

ವಿಜಯಪರ್ವ ‌ಸುದ್ದಿ,‌ ಕೊಪ್ಪಳ
ಶಾಸಕ ಜಮೀರ್ ಅಹ್ಮದ್ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಹಾಗ್ತಾರೆ ಅಂತಾ ಹೇಳಿದ್ದಾರೆ. ಒಂದೊಮ್ಮೆ ಸಿದ್ದರಾಮಯ್ಯ ಮತ್ತೇ ಸಿಎಂ ಆಗಬೇಕು ಎಂದರೆ ಪಾಕಿಸ್ತಾನದಲ್ಲಿ ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಮಂತ್ರಿ ಸಿ. ಟಿ. ರವಿ ಹೇಳಿದರು.

ಕೊಪ್ಪಳದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬುಧವಾರ ಮಾತನಾಡಿದರು.… ..ಮುಂದೆ ಓದಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳರದ್ದು ಅಶಿಸ್ತಿನ ಹೇಳಿಕೆ: ಸ್ವಪಕ್ಷೀಯ ಮಂತ್ರಿಯಿಂದ ಟಾಂಗ್!

ವಿಜಯಪರ್ವ ಸುದ್ದಿ, ಕೊಪ್ಪಳ

ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ನೀಡಿದ್ದು ಅಶಿಸ್ತಿನ ಹೇಳಿಕೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದ ಕೋಳೂರಿನಲ್ಲಿ ಮಳೆಗೆ ಕೊಚ್ಚಿ ಹೋಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿ ಇದ್ದುಕೊಂಡು ವರಿಷ್ಠರ ವಿರುದ್ಧ ಹೀಗೆ ಮಾತನಾಡುವುದು ಸರಿಯಲ್ಲ.… ..ಮುಂದೆ ಓದಿ

ಯೋಗ, ಯೋಗ್ಯತೆ ಇದ್ದವರು ಸಮಗ್ರ ಕರ್ನಾಟಕಕ್ಕೆ ಸಿಎಂ ಆಗಲಿ; ಯತ್ನಾಳಗೆ ಸಿ.ಟಿ.ರವಿ ಟಾಂಗ್

ವಿಜಯಪರ್ವ ಸುದ್ದಿ, ಕೊಪ್ಪಳ
ಸಮಗ್ರ ಕರ್ನಾಟಕದ ಆಶಯಕ್ಕೆ ಮಣ್ಣು ಹಾಕುವ ಕೆಲಸ ಯಾರೂ ಮಾಡಬಾರದು. ಯೋಗ, ಯೋಗ್ಯತೆ ಇರುವ ಯಾರಾದರೂ ಸಮಗ್ರ ಕರ್ನಾಟಕದ ಸಿಎಂ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಮಂತ್ರಿ ಸಿ.ಟಿ.ರವಿ ಹೇಳಿದರು.

ಕೊಪ್ಪಳ ಗವಿಮಠದ‌ ಗವಿಸಿದ್ದೇಶ್ವರ ಸ್ವಾಮೀಜಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದರು.

ಉತ್ತರ ಕರ್ನಾಟಕ ಭಾಗದವರು ಕರ್ನಾಟಕದ ‌ಸಿಎಂ ಆಗಬೇಕು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳರ ಹೇಳಿಕೆಗೆ ಪ್ರತಿಕ್ರಿಯೆ‌ ನೀಡಿದರು.… ..ಮುಂದೆ ಓದಿ

ಕೊಪ್ಪಳ ಜಿಲ್ಲಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ; ಪ್ರತ್ಯೇಕ‌ ಪ್ರಕರಣ ಬಾಲಕಿ, 2 ಕುರಿ ಸಾವು

ವಿಜಯಪರ್ವ ‌ಸುದ್ದಿ, ಯಲಬುರ್ಗಾ
ರಾಜ್ಯ ‌ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕೊಪ್ಪಳ ಜಿಲ್ಲಾದ್ಯಂತ ಸೋಮವಾರ ತಡರಾತ್ರಿಯಿಂದ ಮಳೆರಾಯನ ಅಬ್ಬರ ಆರಂಭವಾಗಿದೆ. ಇನ್ನು ಮಂಗಳವಾರ (ಅ.20)ವೂ ಗುಡುಗು- ಸಿಡಿಲು ಸಹಿತ ಮಳೆಯಾಗಿದ್ದು, ಒಬ್ಬ ಬಾಲಕಿ ಮೃತಪಟ್ಟಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ 2 ಕುರಿ ಸತ್ತಿವೆ.

ಯಲಬುರ್ಗಾ ತಾಲೂಕು ಗೆದಗೇರಿ ತಾಂಡಾದ ರೂಪಾ ಚೌವ್ಹಾಣ(14) ಸಿಡಿಲು ಬಡಿದು ಮೃತಪಟ್ಟಿದ್ದಾಳೆ. 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು‌ ಬಡಿದಿದೆ.… ..ಮುಂದೆ ಓದಿ

error: Content is protected !!